ಕೇವಲ 6.4 ಓವರ್ಗಳಲ್ಲಿ ವಿಶ್ವಕಪ್ನಿಂದ ಹೊರಬಿದ್ದ ಪಾಕಿಸ್ತಾನ
ಬೆನ್ ಸ್ಟೋಕ್ಸ್, ಜೋ ರೂಟ್ ಹಾಗೂ ಜಾನಿ ಬೈರ್‌ಸ್ಟೋವ್ ಬಾರಿಸಿದ ಅರ್ಧಶತಕಗಳೊಂದಿಗೆ ಇಂಗ್ಲೆಂಡ್ ತಂಡವು ನಿಗದಿತ 50 ಓವರ್ಗಳಲ್ಲಿ 337 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಕೇವಲ 6.2 ಓವರ್ಗಳಲ್ಲಿ ಚೇಸ್ ಮಾಡಿದರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್ಗೇರಲು ಅವಕಾಶವಿತ್ತು.
2023 ರಿಂದ ಪಾಕಿಸ್ತಾನ್ ತಂಡ ಅಧಿಕೃತವಾಗಿ ಹೊರಬಿದ್ದಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಬೆನ್ ಸ್ಟೋಕ್ಸ್ (84), ಜೋ ರೂಟ್ (60) ಹಾಗೂ ಜಾನಿ ಬೈರ್‌ಸ್ಟೋವ್ (59) ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು.
ಈ ಅರ್ಧಶತಕಗಳೊಂದಿಗೆ ಇಂಗ್ಲೆಂಡ್ ತಂಡವು ನಿಗದಿತ 50 ಓವರ್ಗಳಲ್ಲಿ 337 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಕೇವಲ 6.4 ಓವರ್ಗಳಲ್ಲಿ ಚೇಸ್ ಮಾಡಿದರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್ಗೇರಲು ಅವಕಾಶವಿತ್ತು.
ಅಂದರೆ ಇಲ್ಲಿ ನ್ಯೂಝಿಲೆಂಡ್ ತಂಡದ ನೆಟ್ ರನ್ ರೇಟ್ ಅನ್ನು ಹಿಂದಿಕ್ಕಿದರೆ ಮಾತ್ರ ಪಾಕ್ ತಂಡಕ್ಕೆ ಸೆಮಿಫೈನಲ್ಗೇರಬಹುದಿತ್ತು. ಹೀಗೆ ನೆಟ್ ರನ್ ರೇಟ್ ಹಿಂದಿಕ್ಕಲು ಪಾಕ್ ತಂಡವು ಇಂಗ್ಲೆಂಡ್ ನೀಡಿದ 338 ರನ್ಗಳ ಗುರಿಯನ್ನು ಕೇವಲ 6.4 ಓವರ್ಗಳಲ್ಲಿ ಚೇಸ್ ಮಾಡಬೇಕಿತ್ತು.
ಆದರೆ 6.4 ಓವರ್ಗಳಲ್ಲಿ ಪಾಕಿಸ್ತಾನ್ ತಂಡ ಕಲೆಹಾಕಿದ್ದು ಕೇವಲ 30 ರನ್ಗಳು ಮಾತ್ರ. ಇನ್ನು ಈ ಪಂದ್ಯದಲ್ಲಿ ಪಾಕ್ ತಂಡ ಗೆದ್ದರೂ ನೌಕೌಟ್ ಹಂತಕ್ಕೇರುವುದಿಲ್ಲ. ಇದರೊಂದಿಗೆ ಏಕದಿನ ವಿಶ್ವಕಪ್ನಿಂದ ಪಾಕಿಸ್ತಾನ್ ತಂಡವು ಅಧಿಕೃತವಾಗಿ ಹೊರಬಿದ್ದಂತಾಗಿದೆ.
ಹಾಗೆಯೇ ಏಕದಿನ ವಿಶ್ವಕಪ್ನ ಸೆಮಿಫೈನಲ್ಸ್ ಪಂದ್ಯಗಳಲ್ಲಿ ಭಾರತ, ನ್ಯೂಝಿಲೆಂಡ್, ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಕಣಕ್ಕಿಳಿಯಲಿದೆ.
ಇಂಗ್ಲೆಂಡ್ (ಪ್ಲೇಯಿಂಗ್ XI): ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಗುಸ್ ಅಟ್ಕಿನ್ಸನ್, ಆದಿಲ್ ರಶೀದ್.
ಪಾಕಿಸ್ತಾನ್ (ಪ್ಲೇಯಿಂಗ್ XI): ಅಬ್ದುಲ್ಲಾ ಶಫೀಕ್, ಫಖರ್ ಝಮಾನ್, ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಂ ಜೂನಿಯರ್, ಹ್ಯಾರಿಸ್ ರೌಫ್.
Comments
Post a Comment