ವೈರಲ್ ಆಗುತ್ತಿರುವ ರಾಮ ಲಲ್ಲಾ ಮೂರ್ತಿ ನಿಜವಾದುದಲ್ಲ: ಅಯೋಧ್ಯೆಯ ಅರ್ಚಕ ಸತ್ಯೇಂದ್ರ ದಾಸ್ ಸ್ಪಷ್ಟೀಕರಣ

ವೈರಲ್ ಆಗುತ್ತಿರುವ ರಾಮ ಲಲ್ಲಾ ಮೂರ್ತಿ ನಿಜವಾದುದಲ್ಲ: ಅಯೋಧ್ಯೆಯ ಅರ್ಚಕ ಸತ್ಯೇಂದ್ರ ದಾಸ್ ಸ್ಪಷ್ಟೀಕರಣ

ಪ್ರಾಣ ಪ್ರತಿಷ್ಠೆ ಪೂರ್ಣಗೊಳ್ಳುವ ಮುನ್ನ ಮುಚ್ಚಿರುವ ಬಾಲ ರಾಮ ಮೂರ್ತಿಯ ಕಣ್ಣುಗಳನ್ನು ತೆರೆಯುವುದಿಲ್ಲ. ಶ್ರೀರಾಮನ ಕಣ್ಣುಗಳು ಕಾಣುವ, ವೈರಲ್ ಆಗಿರುವ ವಿಗ್ರಹವು ನಿಜವಾದುಲ್ಲ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.

ಅಯೋಧ್ಯೆಯ ರಾಮ ಮಂದಿರದ  ಗರ್ಭಗುಡಿಯಲ್ಲಿ ಸ್ಥಾಪಿಸಿರುವ ಬಾಲ ರಾಮ ಅಥವಾ ರಾಮ ಲಲ್ಲಾನ ಮೂರ್ತಿಯದ್ದು  ಎನ್ನಲಾದ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಫೋಟೊ ನಿಜವಾದುದಲ್ಲ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದರು. ರಾಮ ಲಲ್ಲಾ ಮೂರ್ತಿಯದ್ದು ಎನ್ನಲಾದ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಬೆನ್ನಲ್ಲೇ ಅವರು ಈ ಸ್ಪಷ್ಟೀಕರಣ ನೀಡಿದರು. ರಾಮ ಲಲ್ಲಾ ಮೂರ್ತಿಯ ಚಿತ್ರ ಹೇಗೆ ಸೋರಿಕೆಯಾಯಿತು ಎಂಬುದರ ಕುರಿತು ತನಿಖೆ ನಡೆಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಪ್ರಾಣ ಪ್ರತಿಷ್ಠೆ ಪೂರ್ಣಗೊಳ್ಳುವ ಮುನ್ನ ಮುಚ್ಚಿರುವ ಬಾಲ ರಾಮ ಮೂರ್ತಿಯ ಕಣ್ಣುಗಳನ್ನು ತೆರೆಯುವುದಿಲ್ಲ. ಶ್ರೀರಾಮನ ಕಣ್ಣುಗಳು ಕಾಣುವ, ವೈರಲ್ ಆಗಿರುವ ವಿಗ್ರಹವು ನಿಜವಾದುಲ್ಲ. ಮೂರ್ತಿಯ ಕಣ್ಣುಗಳು ಕಾಣುವಂಥ ಫೋಟೊ ಬಹಿರಂಗವಾಗಿದ್ದೇ ಹೌದಾದರೆ ಯಾರಿಂದ ಆಯಿತು ಎಂಬುದರ ಕುರಿತು ತನಿಖೆಯಾಗಬೇಕು. ವಿಗ್ರಹದ ಚಿತ್ರಗಳು ಹೇಗೆ ವೈರಲ್ ಆಗುತ್ತಿವೆ ಎಂಬುದನ್ನು ಪತ್ತೆಮಾಡಬೇಕು ಎಂದು ಆಚಾರ್ಯ ಸತ್ಯೇಂದ್ರ ದಾಸ್ ಆಗ್ರಹಿಸಿದ್ದಾರೆ.

ಬಾಲ ರಾಮನ ಮೂರ್ತಿಯನ್ನು ಬಟ್ಟೆಯಿಂದ ಮುಚ್ಚಲಾಗಿದೆ. ವಿಗ್ರಹವನ್ನು ಇನ್ನೂ ಬಹಿರಂಗಪಡಿಸಿಲ್ಲ. ಅಂತಿಮಗೊಳಿಸಲಾಗಿರುವ ಬಾಲ ರಾಮನ ಮೂರ್ತಿಯನ್ನು ಬಟ್ಟೆಯಿಂದ ಮುಚ್ಚಲಾಗಿದೆ ಎಂದು ಅವರು ಹೇಳಿದ್ದಾರೆ.ಅಯೋಧ್ಯೆಯ ಬಾಲ ರಾಮನದ್ದು ಎನ್ನಲಾದ ಚಿತ್ರಗಳು ಶುಕ್ರವಾರ ಸಂಜೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಲವು ವಿಐಪಿಗಳು ಹಂಚಿಕೊಂಡಿದ್ದಾರೆ. ವಿಶ್ವ ಹಿಂದೂ ಪರಿಷತ್ ಮತ್ತು ಟ್ರಸ್ಟ್‌ನ ಪದಾಧಿಕಾರಿಗಳು ಚಿತ್ರ ಬಿಡುಗಡೆ ಮಾಡಲು ನಿರಾಕರಿಸಿದ್ದರು. ಆದಾಗ್ಯೂ, ಚಿತ್ರ ವೈರಲ್ ಆಗಿದೆ.

ಮತ್ತೊಂದೆಡೆ, ದೇವಾಲಯದೊಳಗೆ ವಿಗ್ರಹವನ್ನು ಇರಿಸುವ ಕೆಲವು ದಿನಗಳ ಮೊದಲು ಚಿತ್ರಗಳನ್ನು ತೆಗೆದಿರಬಹುದು ಮತ್ತು ಅದನ್ನು ಈಗ ಪ್ರಸಾರ ಮಾಡಲಾಗುತ್ತಿದೆ ಎಂದು ವಿಎಚ್‌ಪಿ ನಾಯಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಮೂರ್ತಿಯ ಮೊದಲ ಚಿತ್ರ ಜನವರಿ 22 ರಂದು ಮಾತ್ರ ಲಭ್ಯವಾಗುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದ್ದಾರೆ.

ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರಾಣ ಪ್ರತಿಷ್ಠಾ ಪೂಜೆ ನೆರವೇರಿಸಲಿದ್ದಾರೆ. ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದ ಅರ್ಚಕರ ತಂಡವು ಪ್ರಾಣ ಪ್ರತಿಷ್ಠೆಯ ಮುಖ್ಯ ವಿಧಿವಿಧಾನಗಳನ್ನು ನೆರವೇರಿಸಲಿದೆ. ಇದಕ್ಕಾಗಿ ಪ್ರಧಾನಿ ಅವರು ಸದ್ಯ ಕೆಲವು ಕಠಿಣ ವ್ರತ ಅನುಸರಿಸುತ್ತಿದ್ದಾರೆ ಎನ್ನಲಾಗಿದೆ.


Comments