ಇಲ್ಲಿದೆ ನೋಡಿ IPL 2024ರ ವೇಳಾಪಟ್ಟಿ
17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ 17 ದಿನಗಳ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ಈ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು 2 ಹಂತಗಳಲ್ಲಿ ವೇಳಾಪಟ್ಟಿ ಬಿಡುಗಡೆಯಾಗಲಿದ್ದು, ಮೊದಲ ಹಂತವನ್ನು ಈಗ ಪ್ರಕಟಿಸಲಾಗಿದೆ.
ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ 17 ನೇ ಆವೃತ್ತಿ ಯಾವಾಗ ಪ್ರಾರಂಭವಾಗಲಿದೆ ಎಂಬುದರ ಕುರಿತು ಬಿಗ್ ಅಪ್ಡೇಟ್ ಹೊರಬಿದ್ದಿದೆ. ಅದರಂತೆ ಬಹು ನಿರೀಕ್ಷಿತ ಈ ಚುಟುಕು ಸಮರದ ಮೊದಲ 17 ದಿನಗಳ ಅಂದರೆ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ ಈ ಟೂರ್ನಿ ಮುಂದಿನ ತಿಂಗಳು ಅಂದರೆ ಮಾರ್ಚ್ 22 ರಿಂದ ಪ್ರಾರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯಕ್ಕೆ ಸಿಎಸ್ಕೆಯ ತವರು ನೆಲ ತಮಿಳುನಾಡಿನ ಎಂ ಚಿದಂಬರಂ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಈ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು 2 ಹಂತಗಳಲ್ಲಿ ವೇಳಾಪಟ್ಟಿ ಬಿಡುಗಡೆಯಾಗಲಿದ್ದು, ಮೊದಲ ಹಂತವನ್ನು ಈಗ ಪ್ರಕಟಿಸಲಾಗಿದೆ. ಅದರಂತೆ ಮಾರ್ಚ್ 22 ರಿಂದ ಆರಂಭವಾಗಲಿರುವ ಐಪಿಎಲ್ನ ಮೊದಲ ಹಂತ ಏಪ್ರಿಲ್ 7 ರ ವರೆಗೆ ನಡೆಯಲ್ಲಿದೆ. ಅಂದರೆ ಮೊದಲ ಹಂತದ ಐಪಿಎಲ್ 17 ದಿನಗಳವರೆಗೆ ನಡೆಯಲ್ಲಿದೆ. ಈ ಅವದಿಯಲ್ಲಿ 21 ಪಂದ್ಯಗಳು ನಡೆಯಲ್ಲಿವೆ. ಐಪಿಎಲ್ನ ದ್ವಿತೀಯಾರ್ಧದ ವೇಳಾಪಟ್ಟಿಯನ್ನು ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾದ ನಂತರವಷ್ಟೇ ನಿರ್ಧಾರವಾಗಲಿದೆ ಎಂದು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಈ ಹಿಂದೆಯೇ ತಿಳಿಸಿದ್ದರು. ಅದರಂತೆ ಐಪಿಎಲ್ನ ಉಳಿದಾರ್ಧದ ವೇಳಾಪಟ್ಟಿ ಲೋಕಸಬೆ ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ಹೊರಬರಲಿದೆ.
Comments
Post a Comment