ಹೋಳಿ ವೇಳೆ ರೋಹಿತ್ ಪತ್ನಿ ರಿತಿಕಾರನ್ನು ತಬ್ಬಿಕೊಂಡ ಹಾರ್ದಿಕ್ ಪಾಂಡ್ಯ
ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೆ ಮತ್ತು ಅವರ ಮಗಳು ಹೋಳಿ ಆಡುತ್ತಿರುವಾಗ ಹಾರ್ದಿಕ್ ಪಾಂಡ್ಯ ಅಲ್ಲಿಗೆ ಬಂದು ರಿತಿಕಾ ಅವರಿಗೆ ಹಗ್ ಕೊಟ್ಟಿದ್ದಾರೆ. ಇದರ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಅಲ್ಲದೆ ಹಾರ್ದಿಕ್-ರೋಹಿತ್ ಜೊತೆಯಾಗಿ ಹೋಳಿ ಆಡಿದ್ದಾರೆ.
ರೋಹಿತ್ ಶರ್ಮಾ ಪತ್ನಿ ಮತ್ತು ಅವರ ಮಗಳು ಹೋಳಿ ಆಡುತ್ತಿರುವಾಗ ಹಾರ್ದಿಕ್ ಪಾಂಡ್ಯ ಅಲ್ಲಿಗೆ ಬಂದು ರಿತಿಕಾ ಅವರಿಗೆ ಹಗ್ ಕೊಟ್ಟಿದ್ದಾರೆ. ಇದರ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಅಲ್ಲದೆ ಹಾರ್ದಿಕ್-ರೋಹಿತ್ ಜೊತೆಯಾಗಿ ಹೋಳಿ ಆಡಿದ್ದಾರೆ. ಇದನ್ನು ಕಂಡು ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ನಿಟ್ಟುಸಿರು ಬಿಟ್ಟಿದ್ದಾರೆ. ಈ ಮೂಲಕ ಇವರಿಬ್ಬರ ನಡುವೆ ಯಾವುದೇ ಜಗಳ ಇಲ್ಲ ಎಂಬುದು ಸಾಭೀತಾಗಿದೆ.
ಮುಂಬೈ ಇಂಡಿಯನ್ಸ್ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್ ಹಂಚಿಕೊಂಡ ವಿಡಿಯೋದಲ್ಲಿ, ಮುಂಬೈ ಆಟಗಾರರು, ಅವರ ಕುಟುಂಬ ಮತ್ತು ಸಹಾಯಕ ಸಿಬ್ಬಂದಿಯ ಸದಸ್ಯರೊಂದಿಗೆ ಬಣ್ಣಗಳ ಹಬ್ಬವನ್ನು ಆಚರಿಸಿದ್ದಾರೆ. ಇದರಲ್ಲಿ ರೋಹಿತ್ ಮತ್ತು ಹಾರ್ದಿಕ್ ಒಟ್ಟಿಗೆ ಹೋಳಿ ಆನಂದಿಸುತ್ತಿರುವುದನ್ನು ಕಾಣಬಹುದು. ರೋಹಿತ್ ತಮ್ಮ ಪತ್ನಿ ರಿತಿಕಾ, ಮಗಳು ಸಮೈರಾ ಮತ್ತು ಇತರ ಆಟಗಾರರೊಂದಿಗೆ ಹೋಳಿ ಆನಂದಿಸುತ್ತಿರುವ ವಿಡಿಯೋವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
ಐಪಿಎಲ್ 2024 ರ ಋತುವಿನ ತನ್ನ ಎರಡನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ 2016 ರ ವಿಜೇತ ಸನ್ ರೈಸರ್ಸ್ ಹೈದರಾಬಾದ್ ಅನ್ನು ಎದುರಿಸಲಿದೆ. ಬುಧವಾರ (ಮಾರ್ಚ್ 27) ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.
Comments
Post a Comment