IPL 2024: IPL 2024: ಹೈದರಾಬಾದ್‌ vs ಮುಂಬೈ ಮುರಿದ ದಾಖಲೆಗಳು ಇವು!

 IPL 2024: IPL 2024: ಹೈದರಾಬಾದ್‌ vs ಮುಂಬೈ ಮುರಿದ ದಾಖಲೆಗಳು ಇವು!

IPL 2024: 2013 ರಲ್ಲಿ ಪುಣೆ ವಾರಿಯರ್ಸ್​ ವಿರುದ್ಧ ಆರ್​ಸಿಬಿ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 263 ರನ್ ಕಲೆಹಾಕಿತ್ತು. ಬರೋಬ್ಬರಿ 11 ವರ್ಷಗಳವರೆಗೆ ಈ ದಾಖಲೆ ಆರ್​ಸಿಬಿ ಹೆಸರಿನಲ್ಲಿತ್ತು. ಆದರೀಗ ಆ ದಾಖಲೆಯನ್ನು ಸನ್​ರೈಸರ್ಸ್​ ಹೈದರಾಬಾದ್‌ ತಂಡ ಮುರಿದಿದೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಬರೋಬ್ಬರಿ 277 ರನ್ ಕಲೆಹಾಕಿದೆ.

ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಇನ್ನಿಂಗ್ಸ್​ವೊಂದರಲ್ಲಿ ಅತಿ ದೊಡ್ಡ ರನ್ ಕಲೆಹಾಕಿದ ದಾಖಲೆಯನ್ನು ಸನ್​ರೈಸರ್ಸ್​ ಹೈದರಾಬಾದ್‌ ತಂಡ ನಿರ್ಮಿಸಿದೆ. ಇದಕ್ಕೂ ಮೊದಲು ಈ ದಾಖಲೆ ಆರ್​ಸಿಬಿ ಹೆಸರಿನಲ್ಲಿತ್ತು.

2013 ರಲ್ಲಿ ಪುಣೆ ವಾರಿಯರ್ಸ್​ ವಿರುದ್ಧ ಆರ್​ಸಿಬಿ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 263 ರನ್ ಕಲೆಹಾಕಿತ್ತು. ಬರೋಬ್ಬರಿ 11 ವರ್ಷಗಳವರೆಗೆ ಈ ದಾಖಲೆ ಆರ್​ಸಿಬಿ ಹೆಸರಿನಲ್ಲಿತ್ತು. ಆದರೀಗ ಆ ದಾಖಲೆಯನ್ನು ಸನ್​ರೈಸರ್ಸ್​ ಹೈದರಾಬಾದ್‌ ತಂಡ ಮುರಿದಿದೆ.

ಮುಂಬೈ ವಿರುದ್ಧ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು ಹೈದರಾಬಾದ್‌ ತಂಡ 277 ರನ್ ಕಲೆಹಾಕಿದೆ. ತಂಡದ ಪರ ಮೂವರು ಬ್ಯಾಟರ್​ಗಳು ದಾಖಲೆಯ ಅರ್ಧಶತಕ ಸಿಡಿಸಿ ಮಿಂಚಿದರು.


ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಟ್ರಾವಿಸ್ ಹೆಡ್ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಅಂತಿಮವಾಗಿ ತಮ್ಮ ಇನ್ನಿಂಗ್ಸ್​ನಲ್ಲಿ 24 ಎಸೆತಗಳನ್ನು ಎದುರಿಸಿದ್ದ ಹೆಡ್ 9 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 62 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು.ಟ್ರಾವಿಸ್​ ಹೆಡ್​ ಜೊತೆಗೆ 28 ಎಸೆತಗಳಲ್ಲಿ 63 ರನ್​ಗಳ ಸ್ಫೋಟಕ ಜೊತೆಯಾಟ ನಡೆಸಿದ ಅಭಿಷೇಕ್ ಶರ್ಮಾ ಕೂಡ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿ, ಹೈದರಾಬಾದ್‌ ಪರ ವೇಗದ ಅರ್ಧಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡರು. ಅಂತಿಮವಾಗಿ ಅಭಿಷೇಕ್ ಕೇವಲ 23 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ 3 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್​ಗಳ ಸಹಿತ 63 ರನ್ ಕಲೆಹಾಕಿದರು.

ಈ ಇಬ್ಬರ ನಂತರ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಹೆನ್ರಿಕ್ ಕ್ಲಾಸೆನ್ ಕೂಡ ಕೇವಲ 22 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಆ ನಂತರವೂ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಕ್ಲಾಸೆನ್ 34 ಎಸೆತಗಳಲ್ಲಿ 4 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ ಅಜೇಯ 80 ರನ್ ಸಿಡಿಸಿದರು.

ಇವರಿಗೆ ಉತ್ತಮ ಸಾಥ್ ನೀಡಿದ ಐಡೆನ್ ಮಾರ್ಕ್ರಾಮ್ ಕೂಡ 28 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 42 ರನ್ ಕಲೆಹಾಕಿದರು. ಒಟ್ಟಾರೆ ಈ ಇನ್ನಿಂಗ್ಸ್​ನಲ್ಲಿ ಹೈದರಾಬಾದ್‌ ತಂಡದಿಂದ ಬರೋಬ್ಬರಿ 18 ಸಿಕ್ಸರ್ ಹಾಗೂ 19 ಬೌಂಡರಿಗಳು ಸಿಡಿದವು. ಈ ಮೂಲಕ ಇನ್ನಿಂಗ್ಸ್​ವೊಂದರಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಜಂಟಿ 4ನೇ ತಂಡ ಎಂಬ ದಾಖಲೆಯನ್ನು ಹೈದರಾಬಾದ್‌ ಬರೆದಿದೆ.


Comments